ಶಿವಮೊಗ್ಗ: ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ʼಮಲೆನಾಡಿನ ಮಡಿಲು ಸೌಂದರ್ಯದ ಹೊನಲುʼ ಎಂದು ಹಾಡಿ ಹೊಗಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ಶಿವಮೊಗ್ಗ ರಾಷ್ಟ್ರಕವಿ ಕುವೆಂಪು ಜನ್ಮಭೂಮಿಯ ಜನರಿಗೆ ನನ್ನ ನಮಸ್ಕಾರಗಳು. ಸಿಗಂದೂರು ಚೌಡೇಶ್ವರಿ ಪಾದಗಳಿಗೆ ನನ್ನ ನಮನಗಳು. ಶಿವಮೊಗ್ಗದಲ್ಲಿ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನವಿದ್ದು, ಕೋಟೆ ಆಂಜನೇಯ ಸ್ವಾಮಿಗೂ ನನ್ನ ಪ್ರಣಾಮಗಳು ಎಂದು ಹೇಳಿದರು.
ಇದೇ ವೇಳೆ ಈ ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದದಂದು ಶಿವಮೊಗ್ಗಕ್ಕೆ ಆಗಮಿಸಿದ್ದೆ. ಈ ಬಾರಿ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.