ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಕಾಲೇಜು ವೈದ್ಯರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ವೈದ್ಯರಿಗೆ ಜಿಯೋ ಟ್ಯಾಗ್ ಅಳವಡಿಸುವ ಕುರಿತೂ ಚಿಂತನೆ ನಡೆಸಲಾಗಿದೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ್ದು, ವೈದ್ಯರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ನವೆಂಬರ್ 8ರೊಳಗೆ ರಾಜ್ಯದ ಪಾಲಿಕೆ, ನಗರಸಭಾ ವ್ಯಾಪ್ತಿಯ ಕೊಳಗೇರಿಗಳಲ್ಲಿ 438 ‘ನಮ್ಮ ಕ್ಲಿನಿಕ್’ ಆರಂಭಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದು, 128 ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಗಳನ್ನು ಸಹ ಆರಂಭಿಸಲಾಗಿಸುತ್ತದೆ ಎಂದಿದ್ದಾರೆ.