
ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ಮಾದರಿಯಲ್ಲಿ ಕರ್ನಾಟಕದಲ್ಲಿ ಬುಲ್ಡೋಜರ್ ಮಾದರಿ ತರಲು ಹಿಂದೂ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ. ಹುಬ್ಬಳ್ಳಿಯ ಕೋಮುಗಲಭೆ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳವಂತೆ ಬಿಜೆಪಿ ನಾಯಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಉತ್ತರಪ್ರದೇಶದ ಮಾದರಿಯಲ್ಲಿ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಬುಲ್ಡೋಜರ್ ಮಾದರಿಯನ್ನು ಜಾರಿಗೆ ತರಲಾಗಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿದರೆ ಅಪರಾಧ ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹಿಂದೂಪರ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
ಮಠಗಳ ಅನುದಾನ ಬಿಡುಗಡೆಗೆ ಕಮಿಷನ್: ಸರ್ಕಾರದ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ
ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಉತ್ತರಪ್ರದೇಶ ಮಾದರಿ ಕಾನೂನು ಎಲ್ಲಾ ಕಡೆ ಜಾರಿ ಮಾಡಲು ಸಾಧ್ಯವಿಲ್ಲ ಇರುವ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಇಲಾಖೆಗೆ ತಿಳಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.