alex Certify ಕರ್ನಾಟಕದ ಫಲಿತಾಂಶ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧದ ಜನಾದೇಶ: ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕದ ಫಲಿತಾಂಶ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧದ ಜನಾದೇಶ: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧದ ಜನಾದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ. ಇಂದಿನ ಫಲಿತಾಂಶ ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳಿಗೆ ಶಕ್ತಿ ತುಂಬುತ್ತದೆ ಎಂದು ಅವರು ಆಶಿಸಿದ್ದಾರೆ.

ಇದು ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ವಿರುದ್ಧದ ಜನಾದೇಶ, ಆಪರೇಷನ್ ಕಮಲಕ್ಕೆಅವರ ಬಳಿ ಸಾಕಷ್ಟು ಹಣವಿದೆ. ಆದರೆ ಅವರು ಜನರ ನಂಬಿಕೆಯನ್ನು ಖರೀದಿಸಲು ಸಾಧ್ಯವಾಗಲಿಲ್ಲ. ಜಾತ್ಯತೀತ ರಚನೆಗೆ ಬಿಜೆಪಿಯಿಂದ ಬೆದರಿಕೆ ಇತ್ತು. ರಾಜ್ಯದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದ್ದು, ಇದನ್ನು ಕರ್ನಾಟಕದ ಜನತೆ ಸಹಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದರು.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳನ್ನು ದಾಟುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ನಾವು ಕೂಡ 130 ದಾಟಬಹುದು. ಇದು ದೊಡ್ಡ ಗೆಲುವು. ಬಿಜೆಪಿ ಸರ್ಕಾರದ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಅವರು ಹೇಗೆ ಅಧಿಕಾರ ದುರುಪಯೋಗ ಪಡಿಸಿಕೊಂಡರು ಎಂಬುದನ್ನು ನೋಡಿದ್ದಾರೆ ಎಂದರು.

ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಮೆಟ್ಟಿಲು ಎಂದು ಹೇಳಿದ ಸಿದ್ದರಾಮಯ್ಯ, ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಪಕ್ಷ ಸೋಲುವಂತೆ ಮಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದರು. ನಮಗೆ ಕೇಂದ್ರದಲ್ಲಿ ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಸರ್ಕಾರ ಬೇಕು ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಮತದಾರರಿಗೆ ಶಕ್ತಿ ತುಂಬಿದೆ ಎಂದು ಹೇಳಿದರು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಅವರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು.

ಮತ್ತೊಂದೆಡೆ ಮುಖ್ಯಮಂತ್ರಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...