alex Certify ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..!

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ನಾವು ಈಗಾಗಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಮಾಧ್ಯಮಗಳ ಮೂಲಕ ಮನವಿ ಮಾಡುತ್ತಿದ್ದೇನೆ, ದಯಮಾಡಿ ಬಂದ್​​ ಕರೆಯನ್ನು ಕೈ ಬಿಡಿ. ಈಗಾಗಲೇ ಕೋವಿಡ್​​ ಸಮಸ್ಯೆ ಎದುರಾಗಿದೆ . ಹೀಗಾಗಿ ಬಂದ್​ ಮಾಡಿ ಮತ್ತಷ್ಟು ಸಮಸ್ಯೆ ಮಾಡಬೇಡಿ ಎಂದು ಹೇಳಿದರು.

ಎಂಇಎಸ್​ ಬ್ಯಾನ್​ ಮಾಡುವ ಬಗ್ಗೆ ನಾವು ಕಾನೂನಾತ್ಮಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಈ ಮನವಿಯ ಬಳಿಕವೂ ಬಲವಂತದ ಬಂದ್ ಗೆ ಮುಂದಾದ್ರೆ ಅಲ್ಲಿಯೇ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...