ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದಲೇ ವಿರೋಧ ವ್ಯಕ್ತವಾಗಿದೆ.
ಬೆಳಗಾವಿ ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ, ಎಂಇಎಸ್ ಪುಂಡಾಟ ಪ್ರಕರಣಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿಯೇ ವಿರೋಧ ವ್ಯಕ್ತವಾಗಿದೆ.
BIG NEWS: ಭರ್ಜರಿ ಏರಿಕೆ ಕಂಡ ಸುಪ್ರಿಯಾ ಲೈಫ್ ಸೈನ್ಸ್ ಷೇರುಗಳು
ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚದರಂಗಿ ತಿಳಿಸಿದ್ದಾರೆ. ವಾಟಾಳ್ ನಾಗರಾಜ್ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಕೋವಿಡ್ ಸಂಕಷ್ಟದಿಂದಾಗಿ ಈಗಾಗಲೇ ವ್ಯಾಪಾರ-ವಹಿವಾಟಿನಲ್ಲಿ ಹಲವು ತೊಂದರಗಳಾಗಿವೆ. ಈಗ ಹೊಸ ವರ್ಷದ ಸಂದರ್ಭದಲ್ಲಿಯೇ ಮತ್ತೆ ಬಂದ್ ಗೆ ಕರೆ ನೀಡಿದರೆ ಇನ್ನಷ್ಟು ಸಮಸ್ಯೆಗಳುಂಟಾಗುತ್ತವೆ. ಗಡಿ ನಾಡಿನ ಜನರ ಹಿತದೃಷ್ಟಿಯಿಂದ ಬಂದ್ ಕರೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಎಂಇಎಸ್ ಪುಂಡರ ವಿರುದ್ಧ ಕ್ರಮವಾಗಬೇಕು ಎಂಬುದು ನಮ್ಮ ಒತ್ತಾಯವೂ ಆಗಿದೆ. ಎಂಇಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸುತ್ತೇವೆ. ಆದರೆ ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ತಿಳಿಸಿದ್ದಾರೆ.