alex Certify ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ; ಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ; ಸಿಎಂ ಮಾಹಿತಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15 ರಂದು ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸೋಮವಾರದಂದು ರಾಜ್ಯ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹೇಳಿ ಕಳಿಸಿದಾಗ ಬರಬೇಕಾಗುವುದು ಎಂದು ಹೇಳಿದ್ದಾರೆ. ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ತಿಳಿಸಲಾಗಿದೆ. ಅಮಿತ್ ಶಾ ಭೇಟಿಯಾದ ಸಂದರ್ಭದಲ್ಲಿ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸುತ್ತೇನೆ ಎಂದರು.

ಸರ್ವ ಪಕ್ಷದ ಸಭೆ ವಿಚಾರವಾಗಿ ಮಾತನಾಡಿದ ಸಿಎಂ, ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಾಗುವುದು. ಸಭೆ ನಿಗದಿಯಾದ ಕೂಡಲೇ ತಿಳಿಸಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...