alex Certify ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುವಂತೆ ರಾಜ್ಯದ ಸಂಸದರಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಂಸದರು ಹಾಗೂ ಸಚಿವರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದ ಸಂಸದರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಗಡಿ ವಿವಾದ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದು ಹೆಳಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ ಕೊರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...