ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ದಾಖಲಾಗಿ ಪದವಿಗಳನ್ನು ಪಡೆದುಕೊಳ್ಳುತ್ತಿದ್ದರು ಇದರಿಂದ ಬಹಳ ಅನುಕೂಲವಾಗಿತ್ತು.
ಆದರೆ 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಕೋರ್ಸ್ ಗಳಿಗೆ ದೆಹಲಿಯ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ದ ಮಾನ್ಯತೆ ಸಿಗದಿರುವ ಕಾರಣ ಸುಮಾರು 90 ಸಾವಿರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು.
ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್. ವಿದ್ಯಾಶಂಕರ್, ಈ ಕುರಿತು ಶುಭ ಸುದ್ದಿ ನೀಡಿದ್ದು, 2013-14 ಮತ್ತು 2014-15 ನೇ ಶೈಕ್ಷಣಿಕ ಸಾಲಿನ ಕೋರ್ಸ್ ಗೆ ಯುಜಿಸಿ ಮಾನ್ಯತೆ ಮಾತ್ರ ಇಲ್ಲ. ಆದರೆ ರಾಜ್ಯ ಸರ್ಕಾರದ ಮಾನ್ಯತೆ ಇದೆ. ಇದರ ಜೊತೆಗೆ ಯುಜಿಸಿ ಮಾನ್ಯತೆ ಪಡೆದುಕೊಳ್ಳುವ ಪ್ರಯತ್ನ ನಡೆದಿದ್ದು, ಇನ್ನು ಒಂದು ತಿಂಗಳಲ್ಲಿ ಇದು ಲಭ್ಯವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.