alex Certify ಕಲಾಗ್ರಾಮದಲ್ಲಿಂದು ಸಕಲ ಸರ್ಕಾರಿ ಗೌರವದೊಂದಿಗೆ ಸಿದ್ಧಲಿಂಗಯ್ಯ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಾಗ್ರಾಮದಲ್ಲಿಂದು ಸಕಲ ಸರ್ಕಾರಿ ಗೌರವದೊಂದಿಗೆ ಸಿದ್ಧಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾದ ವಿಧಾನ ಪರಿಷತ್ ಮಾಜಿ ಸದಸ್ಯ, ಸಾಹಿತಿ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ಅಂತ್ಯಸಂಸ್ಕಾರ ಇಂದು ಕಲಾಗ್ರಾಮದಲ್ಲಿ ನೆರವೇರಲಿದೆ.

ಬೆಂಗಳೂರು ಜ್ಞಾನಭಾರತಿ ಕ್ಯಾಂಪಸ್ ಬಳಿಯ ಕಲಾಗ್ರಾಮದ ಜಿ.ಎಸ್. ಶಿವರುದ್ರಪ್ಪ ಅವರ ಸಮಾಧಿಯ ಬಳಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಬೌದ್ಧಧರ್ಮದ ವಿಧಿವಿಧಾನಗಳಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಇಂದು ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಜ್ಞಾನಭಾರತಿ ಕ್ಯಾಂಪಸ್ ಅಂಬೇಡ್ಕರ್ ಅಧ್ಯಯನ ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ದರ್ಶನ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...