ಕಲಾ ತಂಡಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಈ ಮೊದಲು ನೀಡುತ್ತಿದ್ದ 5 ಲಕ್ಷ ರೂಪಾಯಿ ಧನಸಹಾಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದ ಕಲಾ ತಂಡಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿ ಧನ ಸಹಾಯವನ್ನು ನೀಡಲಾಗುತ್ತಿದ್ದು, ಇದನ್ನು 2 ಲಕ್ಷ ರೂಪಾಯಿಗಳಿಗೆ ಇಳಿಕೆ ಮಾಡಲಾಗಿತ್ತು.
ಆದರೆ ಇದನ್ನು ಕಲಾ ತಂಡಗಳು ವಿರೋಧಿಸಿದ್ದು ಸರ್ಕಾರದ ಗಮನಕ್ಕೂ ತರಲಾಗಿತ್ತು. ಇದೀಗ ಸರ್ಕಾರದ ಸೂಚನೆಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 5 ಲಕ್ಷ ರೂಪಾಯಿ ಧನ ಸಹಾಯ ಮುಂದುವರಿಸಲು ಆದೇಶ ಹೊರಡಿಸಿದೆ. ಜೊತೆಗೆ ಡಿಸೆಂಬರ್ ಅಂತ್ಯದೊಳಗೆ ಮೂರು ಕಾರ್ಯಕ್ರಮ ಮುಗಿಸಬೇಕೆಂಬ ಆದೇಶವನ್ನು ಮಾರ್ಪಡಿಸಿ ವರ್ಷದಲ್ಲಿ ಮೂರು ಕಾರ್ಯಕ್ರಮ ಎಂದು ತಿದ್ದುಪಡಿ ಮಾಡಲಾಗಿದೆ.