ಕೇಂದ್ರ ಸರ್ಕಾರ ಪೆಟ್ರೋಲ್ – ಡೀಸೆಲ್ ಬೆಲೆ ನಿಗದಿಪಡಿಸುವ ಅಧಿಕಾರವನ್ನು ತೈಲ ಕಂಪನಿಗಳಿಗೆ ನೀಡಿದ್ದು ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಲೆಗಳಿಗನುಗುಣವಾಗಿ ಇದನ್ನು ನಿರ್ಧಾರ ಮಾಡಲಾಗುತ್ತದೆ.
ಹೀಗಾಗಿ ಒಮ್ಮೊಮ್ಮೆ ಪ್ರತಿದಿನವೂ ಬೆಲೆ ಏರಿಳಿತ ಕಾಣುತ್ತಿದ್ದು, ಚುನಾವಣೆ ಸಂದರ್ಭಗಳಲ್ಲಿ ಅದು ಮುಗಿಯುವವರೆಗೆ ಮಾತ್ರ ಪೆಟ್ರೋಲ್ – ಡೀಸೆಲ್ ಬೆಲೆ ಒಂದೇ ತೆರನಾಗಿರುತ್ತದೆ.
ಇದೀಗ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ 2021-22 ನೇ ಹಣಕಾಸು ವರ್ಷದಲ್ಲಿ ಎಷ್ಟು ಬಾರಿ ಪೆಟ್ರೋಲ್ – ಡೀಸೆಲ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿದ್ದರು.
ಇದಕ್ಕೆ ಸೋಮವಾರದಂದು ಸಂಸತ್ತಿನಲ್ಲಿ ಉತ್ತರ ನೀಡಿರುವ ಪೆಟ್ರೋಲಿಯಂ ಹಾಗೂ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ ತೇಲಿ, 2021 – 22ನೇ ಹಣಕಾಸು ವರ್ಷದಲ್ಲಿ ಪೆಟ್ರೋಲ್ ಬೆಲೆಯನ್ನು 78 ಬಾರಿ ಹಾಗೂ ಡೀಸೆಲ್ ಬೆಲೆಯನ್ನು 76 ಬಾರಿ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.