alex Certify ಕಳೆದ 10 ವರ್ಷಗಳಲ್ಲಿ ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ; ಆರೋಗ್ಯ ಸಚಿವರ ಕಳವಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದ 10 ವರ್ಷಗಳಲ್ಲಿ ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ; ಆರೋಗ್ಯ ಸಚಿವರ ಕಳವಳ

ಕಳೆದ 10 ವರ್ಷಗಳಿಂದ ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿಮ್ಹಾನ್ಸ್‌ ನಲ್ಲಿ ನಡೆದ ಮಿದುಳಿನ ಆರೋಗ್ಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇತ್ತೀಚಿನ ವರ್ಷಗಳಲ್ಲಿ ಪಾರ್ಶ್ವವಾಯು, ಮೂರ್ಛೆರೋಗ, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದರು.

ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಶೇಕಡಾ 8 ರಷ್ಟು ಜನರು ಸಾವಿಗೀಡಾಗುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ಟಿ-ಮನಸ್ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನ ಮಾಡುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪೈಲಟ್‌ ಪ್ರಾಜೆಕ್ಟ್‌ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಪಿಎಚ್‌ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್‌ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...