ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಸ್ತದಲ್ಲಿ ‘ಅದೃಷ್ಟ ರೇಖೆ’ ಸೇರ್ಪಡೆ…!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲು ಕಾಂಗ್ರೆಸ್ ತಯಾರಿ ನಡೆಸಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದಾದ್ಯಂತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದಾರೆ.

ಇದರ ಮಧ್ಯೆ ಪ್ರಚಾರದ ಜೊತೆಗೆ ಡಿ.ಕೆ. ಶಿವಕುಮಾರ್ ಜ್ಯೋತಿಷಿಗಳ ಮೊರೆ ಸಹ ಹೋಗಿದ್ದಾರೆ ಎನ್ನಲಾಗಿದ್ದು, ಅವರ ಸಲಹೆಯಂತೆ ಕಾಂಗ್ರೆಸ್ ಚಿಹ್ನೆಯಾದ ಅಭಯ ಹಸ್ತದಲ್ಲಿ ಅದೃಷ್ಟ ರೇಖೆಯೊಂದನ್ನು ಸೇರ್ಪಡೆ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆಯಲ್ಲಿ ಅದೃಷ್ಟ ರೇಖೆ ಇರುವ ಹಸ್ತದ ಗುರುತನ್ನು ಬಳಸಿಕೊಂಡಿರುವುದು ಈಗ ಬಹಿರಂಗವಾಗಿದೆ.

ಈ ಹಿಂದಿನ ಕಾಂಗ್ರೆಸ್ ಹಸ್ತದ ಚಿಹ್ನೆಯಲ್ಲಿ ಅಡ್ಡಲಾಗಿ ಮೂರು ಗೆರೆಗಳಿದ್ದು, ಅದಕ್ಕೆ ಈಗ ಲಂಬವಾಗಿ ಮತ್ತೊಂದು ಗೆರೆಯನ್ನು ಎಳೆಯಲಾಗಿದೆ. ಈ ರೀತಿ ಮಾಡಿದರೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೃಷ್ಟ ಒಲಿಯಲಿದೆ ಎಂಬ ಜ್ಯೋತಿಷಿಗಳ ಸಲಹೆಯನ್ನು ಪರಿಗಣಿಸಿ ಈ ರೀತಿ ಮಾಡಲಾಗಿದೆ ಎಂದು ಹೇಳಲಾಗಿದೆ. ಇದು ಚುನಾವಣೆಯಲ್ಲಿ ಎಷ್ಟರಮಟ್ಟಿಗೆ ವರ್ಕೌಟ್ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read