alex Certify ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಪಕ್ಷ ತೊರೆದ ಹಿರಿಯ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಪಕ್ಷ ತೊರೆದ ಹಿರಿಯ ನಾಯಕ

ಚಂಡೀಗಢ: ಪಂಜಾಬ್ ನ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪ್ರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಪ್ರದೀಪ್ ಛಾಬ್ರಾ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಆರೋಪದ ಮೇಲೆ ಚಂಡಿಗಢ ಕಾಂಗ್ರೆಸ್ ನಗರ ಘಟಕದಿಂದ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ ಮರುದಿನದಲ್ಲೇ ಪ್ರದೀಪ್ ಛಾಬ್ರಾ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಕಾಂಗ್ರೆಸ್ ತೊರೆದ ಬಗ್ಗೆ ಮಾಹಿತಿ ನೀಡಿದ ಪ್ರದೀಪ್, ಆಕ್ರೋಶವನ್ನು ಹೊರಹಾಕದಿರುವುದು ಮತ್ತು ಸುಳ್ಳು ಸಹಿಸಿಕೊಳ್ಳುವುದು ಸ್ವಾಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಪಂಜಾಬ್ ನಲ್ಲಿ ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...