alex Certify ಕಾಂಗ್ರೆಸ್ ಗೆ ವೋಟ್ ಹಾಕಿದ್ದೇಕೆ ಎಂದು ಕೇಳಿದ್ದಕ್ಕೆ ‘ಬಿಕಾಸ್ ಐ ಲವ್ ಇಟ್’ ಎಂದ ಜೆಡಿಎಸ್ ಶಾಸಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ವೋಟ್ ಹಾಕಿದ್ದೇಕೆ ಎಂದು ಕೇಳಿದ್ದಕ್ಕೆ ‘ಬಿಕಾಸ್ ಐ ಲವ್ ಇಟ್’ ಎಂದ ಜೆಡಿಎಸ್ ಶಾಸಕ

ನಿರೀಕ್ಷೆಯಂತೆ ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದೆ. ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ನೀಡಿದ್ದು, ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.

ವಿಧಾನಸೌಧದಲ್ಲಿರುವ ಮತದಾನ ಕೊಠಡಿಯಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ಅವರ ಬಂದ ಶ್ರೀನಿವಾಸಗೌಡ ಕಾಂಗ್ರೆಸ್ ಗೆ ಮತ ಹಾಕಿರುವುದಾಗಿ ಹೇಳಿಕೊಂಡರು. ಯಾಕೆ ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ‘ಬಿಕಾಸ್ ಐ ಲವ್ ಇಟ್’ ಎಂದು ಹೇಳಿದ್ದಾರೆ.

BIG NEWS: ಕಾಂಗ್ರೆಸ್ ಗೆ ಮತ ಹಾಕಿದ ಜೆಡಿಎಸ್ ಶಾಸಕ; ಕ್ರಾಸ್ ವೋಟ್ ಮಾಡಿ ಸಿದ್ದರಾಮಯ್ಯ ಭೇಟಿಯಾದ ಶ್ರೀನಿವಾಸ್ ಗೌಡ

ರಾಜ್ಯ ವಿಧಾನಸಭಾ ಚುನಾವಣೆ ಸನಿಹದಲ್ಲಿರುವ ಸಂದರ್ಭದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಇನ್ನಷ್ಟು ಜೆಡಿಎಸ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಸಂಜೆ ಹೊರಬೀಳುವ ಫಲಿತಾಂಶದ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...