ಬೆಂಗಳೂರು: ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಲು ಎಲ್ಲಾ ರಾಜ್ಯಗಳಲ್ಲಿಯೂ ರಾಜಭವನಕ್ಕೆ ಮುತ್ತಿಗೆ ಹಾಕಲು ಕರೆ ನೀಡಲಾಗಿದೆ. ಸಂವಿಧಾನ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ರಾಜಭವನ ಚಲೋ ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ತನಿಖೆ ಹೆಸರಲ್ಲಿ ಅಧಿಕಾರಿಗಳು, ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಎಐಸಿಸಿ ಕಚೇರಿಯನ್ನು ಪೊಲೀಸರು ಆಕ್ರಮಿಸಿಕೊಂಡಿದ್ದಾರೆ. ನಮಗೆ ಕಚೇರಿ ಪ್ರವೇಶಿಸಲು ಬಿಡುತ್ತಿಲ್ಲ. ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ಪೊಲೀಸರು, ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಹತ್ಯೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
BIG NEWS: 112 ದಿನಗಳ ಬಳಿಕ ಕರ್ನಾಟಕದ ‘ಕೊರೊನಾ’ ಕೇಸ್ ಗಳಲ್ಲಿ ಏಕಾಏಕಿ ಹೆಚ್ಚಳ
ಇದು ಹೀಗೆ ಮುಂದುವರೆಯಲು ಬಿಟ್ಟರೆ ಇಡೀ ಸಮಾಜವನ್ನೇ ಬಿಜೆಪಿಯವರು ಹಾಳು ಮಾಡ್ತಾರೆ. ಬಿಜೆಪಿಯೇತರ ಎಲ್ಲಾ ಪಕ್ಷ ಇದನ್ನು ಖಂಡಿಸಲಿ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಯಲಿದೆ. ಬಿಜೆಪಿ ನಾಯಕರು ಸಂವಿಧಾನಕ್ಕೆ, ಕಾನೂನಿಗೆ ಬೆಲೆ ಕೊಡುತ್ತಿಲ್ಲ. ಇಂದು ಕಾಂಗ್ರೆಸ್ ನವರಿಗೆ, ನಾಳೆ ಬೇರೆಯವರಿಗೆ ದಬ್ಬಾಳಿಕೆ ನಡೆಸುವುದೇ ಸರ್ಕಾರ ಎಂದುಕೊಂಡಿದ್ದಾರೆ. ಬಿಜೆಪಿ ಷಡ್ಯಂತ್ರವನ್ನು ನಾವೆಲ್ಲರು ಖಂಡಿಸಬೇಕಿದೆ. ಪ್ರಜಾಪ್ರಭುತ್ವ ಉಳಿವಿಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.