ನವದೆಹಲಿ: ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜಿತಿನ್ ಪ್ರಸಾದ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಜಿತಿನ್ ಎರಡು ಬಾರಿ ಶಾಸಕರಾಗಿದ್ದರು. ಇದೀಗ ಏಕಾಏಕಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ತರಿಸಿಕೊಂಡಿದ್ದ ಬಿಯರ್ ಅನ್ನು ಮರಳಿ ಕಳುಹಿಸಲು ಮುಂದಾದ ಜರ್ಮನ್ ಮಿಲಿಟರಿ…! ಇದರ ಹಿಂದಿದೆ ಈ ಕಾರಣ
ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಮ್ಮುಖದಲ್ಲಿ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ಗೋಯಲ್, ಜಿತಿನ್ ಪ್ರಸಾದ್ ಉತ್ತರ ಪ್ರದೇಶಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಪಲ್ಟಿ ಗಿರಾಕಿ; ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ
ಉತ್ತರ ಪ್ರದೇಶದಲ್ಲಿ ಚುನಾವಣೆ ಹೊಸ್ತಿಲಲ್ಲಿ ಜಿತಿನ್ ಪ್ರಸಾದ್ ಕಾಂಗ್ರೆಸ್ ಸೇರ್ಪಡೆ ಯುಪಿ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದೆ.