alex Certify ಕಾಂಗ್ರೆಸ್ – ಬಿಜೆಪಿ ನಡುವೆ ಟ್ವಿಟ್ಟರ್‌ ನಲ್ಲಿ ನೈಟ್ ಕ್ಲಬ್ – ಶಾಂಪೇನ್ ವಾರ್…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ – ಬಿಜೆಪಿ ನಡುವೆ ಟ್ವಿಟ್ಟರ್‌ ನಲ್ಲಿ ನೈಟ್ ಕ್ಲಬ್ – ಶಾಂಪೇನ್ ವಾರ್…..!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳದ ನೈಟ್ ಕ್ಲಬ್ ವೊಂದರಲ್ಲಿ ಭಾಗಿಯಾಗಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ಪಕ್ಷ, ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಜಾವ್ಡೇಕರ್ ಪಾರ್ಟಿಯೊಂದರಲ್ಲಿ ಶಾಂಪೇನ್ ಬಾಟಲಿಯನ್ನು ಓಪನ್ ಮಾಡಿ ಸಂಭ್ರಮಾಚರಣೆಯಲ್ಲಿ ತೊಡಗಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ಬಿ.ವಿ. ಶ್ರೀನಿವಾಸ್ ಅವರು ಈ ಫೋಟೋವನ್ನು ಬಿಡುಗಡೆ ಮಾಡಿದ್ದು, `”ಈ ಚಿತ್ರದಲ್ಲಿ ಇರುವವರು ಯಾರು ? ಗುರುತಿಸಿ’’ ಎಂದು ಕಿಚಾಯಿಸಿದ್ದಾರೆ.

ನೇಪಾಳದ ಕಠ್ಮಂಡುವಿನಲ್ಲಿ ರಾಹುಲ್ ಗಾಂಧಿ ನೈಟ್ ಕ್ಲಬ್ ವೊಂದರಲ್ಲಿನ ಪಾರ್ಟಿಯಲ್ಲಿ ತೊಡಗಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಬಿಜೆಪಿ, ರಾಹುಲ್ ಗಾಂಧಿಯವರ ಪಕ್ಷದಲ್ಲಿ ಸ್ಫೋಟವಾಗುತ್ತಿರುವ ಸಂದರ್ಭದಲ್ಲಿ ಅವರು ನೈಟ್ ಕ್ಲಬ್ ನಲ್ಲಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಕಾಲೆಳೆದಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಪಕ್ಷದ ನಾಯಕರು, ರಾಹುಲ್ ಗಾಂಧಿ ಪತ್ರಕರ್ತ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನೇಪಾಳಕ್ಕೆ ಹೋಗಿದ್ದಾರೆ. ಇದೇನು ಅಪರಾಧವಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯನ್ನು ಕಲ್ಪಿಸಿದೆ.

ಬಿಜೆಪಿ, ರಾಹುಲ್ ಗಾಂಧಿ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿ ಇರಿಸು ಮುರಿಸು ಉಂಟು ಮಾಡಿದ್ದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕ ಬಿ.ವಿ. ಶ್ರೀನಿವಾಸ್ ಅವರು, ಪ್ರಕಾಶ್ ಜಾವ್ಡೇಕರ್ ಶಾಂಪೇನ್ ಬಾಟಲಿಯನ್ನು ಓಪನ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ಫೋಟೋವನ್ನು ಟ್ಯಾಗ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ, ತಮ್ಮ ನಾಯಕ ರಾಹುಲ್ ಗಾಂಧಿ ಪರ ಬ್ಯಾಟ್ ಬೀಸಿದ್ದು, ರಾಹುಲ್ ಗಾಂಧಿಯವರು ಖಾಸಗಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನಿತರಾಗಿ ನೇಪಾಳಕ್ಕೆ ಹೋಗಿದ್ದಾರೆ. ಅದೇನು ಅಪರಾಧವಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಹೀಗೆ, ಉಭಯಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದ್ದು, ಪರಸ್ಪರರ ನಡುವೆ ಆರೋಪ – ಪ್ರತ್ಯಾರೋಪಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...