alex Certify ಕಾಂಗ್ರೆಸ್ ಶಾಸಕನ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ಲಕ್ಷ್ಮಣ ಸವದಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕನ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ಲಕ್ಷ್ಮಣ ಸವದಿ…!

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಲಭ್ಯವಾಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ತಿರುಗಿ ಬಿದ್ದಿರುವ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜೊತೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವ ಲಕ್ಷ್ಮಣ ಸವದಿ ಇಂದು ಅವರುಗಳನ್ನು ಭೇಟಿಯಾಗಿ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಅಥಣಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಲಕ್ಷ್ಮಣ ಸವದಿ ಅವರಿಗೆ ನೀಡಲು ತೀರ್ಮಾನಿಸಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಮೇಶ್ ಜಾರಕಿಹೊಳಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಬಹುತೇಕ ಇಂದು ಸಂಜೆಯೊಳಗೆ ಲಕ್ಷ್ಮಣ ಸವದಿ ತಮ್ಮ ನಿಲುವು ಪ್ರಕಟಿಸಲಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...