ತುಮಕೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಬೆಂಬಲಿಗರೊಂದಿಗೆ ಜೂನ್ 19ರಂದು ಕುಣಿಗಲ್ ಠಾಣೆ ಎದುರು ಶಾಸಕ ರಂಗನಾಥ್, ಸಿಪಿಐ ಗುರುಪ್ರಸಾದ್ ವಿರುದ್ಧ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಶಾಸಕರ ವಿರುದ್ಧ ಎನ್ ಸಿ ಆರ್ ದಾಖಲಾಗಿತ್ತು. ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಜೆಡಿಎಸ್ ಮುಖಂಡ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಇದೀಗ ಎಫ್ ಐ ಆರ್ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವಿಳಂಬ ಖಂಡಿಸಿ ಶಾಸಕರು ಪ್ರತಿಭಟನೆ ನಡೆಸಿದ್ದರು.