alex Certify ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ FIR ದಾಖಲು

ತುಮಕೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಬೆಂಬಲಿಗರೊಂದಿಗೆ ಜೂನ್ 19ರಂದು ಕುಣಿಗಲ್ ಠಾಣೆ ಎದುರು ಶಾಸಕ ರಂಗನಾಥ್, ಸಿಪಿಐ ಗುರುಪ್ರಸಾದ್ ವಿರುದ್ಧ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಶಾಸಕರ ವಿರುದ್ಧ ಎನ್ ಸಿ ಆರ್ ದಾಖಲಾಗಿತ್ತು. ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಜೆಡಿಎಸ್ ಮುಖಂಡ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಇದೀಗ ಎಫ್ ಐ ಆರ್ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವಿಳಂಬ ಖಂಡಿಸಿ ಶಾಸಕರು ಪ್ರತಿಭಟನೆ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...