alex Certify ‘ಕಾಂತಾರ’ ಮತ್ತು ಧರ್ಮ; ನಟ ಕಿಶೋರ್ ಅವರಿಂದ ಸುದೀರ್ಘ ಪೋಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾಂತಾರ’ ಮತ್ತು ಧರ್ಮ; ನಟ ಕಿಶೋರ್ ಅವರಿಂದ ಸುದೀರ್ಘ ಪೋಸ್ಟ್

ರೆಡ್ ಕಾಲರ್ ಮೂಲಕ ಹಿಂದಿ ಗೆ ಕಿಶೋರ್ ಪದಾರ್ಪಣೆ- Kannada Prabha

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಮಧ್ಯೆ ನಟ ಚೇತನ್ ಅವರು ದೈವಗಳು ಕುರಿತು ನೀಡಿರುವ ಹೇಳಿಕೆಯೊಂದು ಪರ – ವಿರೋಧದ ಹೇಳಿಕೆಗಳಿಗೆ ಕಾರಣವಾಗಿದ್ದು, ಇದೀಗ ನಟ ಕಿಶೋರ್ ಅವರು ಸಹ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದಾರೆ.

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ. ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?? ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೇವಲ ಓಟಿಗಾಗಿ ಪಟೇಲ್, ಗಾಂಧಿ, ಬೋಸ್, ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ, ರಾಷ್ಟ್ರ ಗೀತೆ, ಧ್ವಜ, ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನ ಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಮನವಿ ಮಾಡಿದ್ದಾರೆ.

https://twitter.com/actorkishore/status/1584325040480215040

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...