ಬ್ರಿಟನ್ನಿನ ಬರ್ಮಿಂಗ್ಹ್ಯಾಮ್ ನಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ 22ನೇ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಸೋಮವಾರ ತಡ ರಾತ್ರಿ ತೆರೆ ಬಿದ್ದಿದೆ. ಈ ಕ್ರೀಡಾಕೂಟದಲ್ಲಿ ಭಾರತೀಯರು ಭರ್ಜರಿ ದರ್ಶನ ನೀಡಿದ್ದು, ಪದಕಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದೆ.
ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಭಾರತೀಯ ಮೂಲದ ಸಂಗೀತಗಾರ ಸ್ಟೀವನ್ ಕಪೂರ್ ವಿವಿಧ ಹಾಡುಗಳನ್ನು ಹಾಡಿದ್ದಾರೆ. ಅಲ್ಲದೆ ಭಾಂಗ್ರಾ ನೃತ್ಯ ಎಲ್ಲರ ಗಮನ ಸೆಳೆದಿದೆ.
22ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 72 ದೇಶಗಳಿಂದ 4500 ಕ್ರೀಡಾಪಟುಗಳು ಭಾಗವಹಿಸಿದ್ದು, ಮುಂದಿನ ಕ್ರೀಡಾಕೂಟ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ 2026 ಕ್ಕೆ ನಡೆಯಲಿದೆ. ಹೀಗಾಗಿ ಕಾಮನ್ವೆಲ್ತ್ ಧ್ವಜವನ್ನು ವಿಕ್ಟೋರಿಯಾ ರಾಜ್ಯದ ಪ್ರತಿನಿಧಿಗೆ ಹಸ್ತಾಂತರಿಸಲಾಗಿದೆ.