alex Certify ಕಾಮನ್ವೆಲ್ತ್ ಗೇಮ್ಸ್ ಗೆ ಇಂದಿನಿಂದ ಚಾಲನೆ; ಅದ್ದೂರಿ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮನ್ವೆಲ್ತ್ ಗೇಮ್ಸ್ ಗೆ ಇಂದಿನಿಂದ ಚಾಲನೆ; ಅದ್ದೂರಿ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ

22ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಬರ್ಮಿಂಗ್ ಹ್ಯಾಮ್ ನಲ್ಲಿ ಆರಂಭವಾಗಲಿದ್ದು, ಅದಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ಭಾರತೀಯ ಕಾಲಮಾನ ರಾತ್ರಿ 11:30ಕ್ಕೆ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ವೇಳೆ 30,000ಕ್ಕೂ ಅಧಿಕ ಪ್ರೇಕ್ಷಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ರಾಣಿ ಎಲಿಜಬೆತ್ ಅನುಪಸ್ಥಿತಿಯಲ್ಲಿ ರಾಜಕುಮಾರ ಚಾರ್ಲ್ಸ್ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾಣಿ ಎಲಿಜಬೆತ್ ಬಕಿಂಗ್ ಹ್ಯಾಮ್ ಅರಮನೆಯಿಂದಲೇ ಸಂದೇಶವನ್ನು ಓದುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಉದ್ಘಾಟನಾ ಸಮಾರಂಭದ ವೇಳೆ ಲೇಸರ್ ಶೋ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕೂ ಮುನ್ನ 72 ರಾಷ್ಟ್ರಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಪಥ ಸಂಚಲನ ನಡೆಸಲಿದ್ದಾರೆ.

ಉದ್ಘಾಟನಾ ಸಮಾರಂಭದ ವೇಳೆ ನಡೆಯುವ ಪಥ ಸಂಚಲನದಲ್ಲಿ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ಭಾರತದ ಧ್ವಜ ಧಾರಿಣಿಯಾಗಲಿದ್ದು, ಗಾಯದ ಕಾರಣಕ್ಕೆ ನೀರಜ್ ಚೋಪ್ರಾ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ ಬಿದ್ದಿರುವ ಹಿನ್ನೆಲೆಯಲ್ಲಿ ಪಿ.ವಿ. ಸಿಂಧು ಅವರಿಗೆ ಈ ಅವಕಾಶ ಒದಗಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...