
ಕಾರಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಮಹಿಳೆಯ ಜತೆ ಸೆಕ್ಸ್ನಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಇದಕ್ಕೆ ಕಾರಣ ಸೆಕ್ಸ್ ಮಾಡುತ್ತಿದ್ದುದು ಅಲ್ಲ, ಬದಲಿಗೆ ಆತ ಆ ಸಮಯದಲ್ಲಿ ಸೀಟ್ ಬೆಲ್ಟ್ ಧರಿಸಲಿಲ್ಲ ಎಂದು !
ಇಂಥದ್ದೊಂದು ವಿಚಿತ್ರ ಘಟನೆ ನಡೆದಿರುವುದು . ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಹೆದ್ದಾರಿಯಲ್ಲಿ. ಅಮನ್ ಎಂಬಾತನಿಗೆ ಪೊಲೀಸರು £600 (ಅಂದಾಜು ರೂ. 56,000) ದಂಡ ವಿಧಿಸಿದ್ದಾರೆ.
ಈತ ಸೀಟ್ ಬೆಲ್ಟ್ ಧರಿಸದೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಸಿಸಿ ಟಿವಿಯಲ್ಲಿ ಸೆರೆಯಾದ ನಂತರ ದಂಡ ವಿಧಿಸಲಾಗಿದೆ.
ಹೆದ್ದಾರಿಯ ಒಂದೆಡೆಯಿಂದ ಬರುತ್ತಿರುವಾಗಲೇ ಮತ್ತೊಂದು ಕಡೆಯಲ್ಲಿನ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿತ್ತು. ಆತ ಬರುತ್ತಿದ್ದಂತೆಯೇ ಪೊಲೀಸರು ದಂಡ ವಿಧಿಸಿದ್ದಾರೆ. ನಂತರ ಇದರ ವಿಡಿಯೋ ಹರಿಬಿಡಲಾಗಿದ್ದು, ಜನರಿಗೆ ಎಚ್ಚರಿಕೆ ನೀಡಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಶ್ವಾದ್ಯಂತ ಸುದ್ದಿ ಮಾಡುತ್ತಿದೆ.
ಈ ರೀತಿ ಕಾರು ಚಾಲನೆ ಮಾಡುತ್ತಲೇ ಸೀಟ್ಬೆಲ್ಟ್ ಧರಿಸದೇ ಇರುವುದು ಪ್ರಾಣಕ್ಕೆ ಅಪಾಯಕಾರಿಯಾಗಿದೆ ಎಂದು ದಂಡ ವಿಧಿಸಿರುವುದಾಗಿ ಆಸ್ಟ್ರೇಲಿಯಾ ಪೊಲೀಸರು ಹೇಳಿದ್ದಾರೆ. ಪ್ರಯಾಣಿಕರ ಸುರಕ್ಷತೆ ನಮ್ಮ ಕರ್ತವ್ಯ ಎಂದಿದ್ದಾರೆ.