ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಫುಡ್ ಡೆಲಿವರಿ ಏಜೆಂಟ್ಗಳು ಸಾವನ್ನಪ್ಪಿದ ದಾರುಣ ಘಟನೆ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯ ಅರ್ಜುನ್ ಮಾರ್ಗದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಮಧ್ಯಪ್ರದೇಶದ ಗೋವಿಂದ್ (20), ಉತ್ತರಾಖಂಡದ ಗೋಪಾಲ್ (21), ಜಿತೇಂದರ್ ಮೊಂಡಲ್ (35) ಮತ್ತು ಬಿಹಾರದ ರಜನೀಶ್ (22) ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಈ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಲ್ವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಸಹ ವೈದ್ಯರು ಇವರು ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಿದ್ದಾರೆ.
ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದ್ದು ಅವರನ್ನು ಶೀಘ್ರದಲ್ಲಿಯೇ ಬಂಧಿಸುತ್ತೇವೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.