alex Certify ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಹತ್ತಿರ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಮೈಸೂರಿನ ಮಾರ್ಗವಾಗಿ ಸಂಚರಿಸುತ್ತಿದ್ದರೆ, ಬಸ್ ಬೆಳ್ಳೂರು ಮಾರ್ಗವಾಗಿ ತೆರಳುತ್ತಿತ್ತು. ಈ ಸಂದರ್ಭದಲ್ಲಿಯೇ ಕಾರು ಹಾಗೂ ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರು ಸೋಮವಾರ ಪೇಟೆ ಮೂಲದವರು ಎಂದು ತಿಳಿದು ಬಂದಿದ್ದು, ಸುದೀಪ್(35), ಶ್ರೀಜಾ(30), ತಂಗಮ್ಮ(55) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಶವಗಳನ್ನು ನಾಗಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಜನರು ಆದಿಚುಂಚನಗಿರಿ ಕ್ಷೇತ್ರದ ದರ್ಶನ ಮುಗಿಸಿಕೊಂಡು ಮರಳಿ ಹೊರಟಿದ್ದರು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನಾಗಮಂಗಲ ಗ್ರಾಮಾಂತರ ಪೊಲೀಸರು, ಶವಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...