alex Certify ಕಾರು – ಲಾರಿ ಡಿಕ್ಕಿ; ನವದಂಪತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು – ಲಾರಿ ಡಿಕ್ಕಿ; ನವದಂಪತಿ ಸ್ಥಳದಲ್ಲೇ ದುರ್ಮರಣ

ತುಮಕೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.

ರಘು (35) ಅನುಷಾ (28) ಮೃತ ದಂಪತಿಗಳು. ಹಾಸನ ಜಿಲ್ಲೆಯ ಅರಸಿಕೆರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿ ಮೂಲದ ಅನುಷಾ ಕಳೆದ ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...