ಮೈಸೂರು: ನಗರದಲ್ಲಿನ ಕಾರು ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಈ ಘಟನೆಯು ನಗರದ ಜೆಎಲ್ಬಿ ರಸ್ತೆಯಲ್ಲಿನ ಅದ್ವೈತ್ ಹುಂಡೈ ಎಂಬ ಶೋರೂಮ್ ನಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಬೆಂಕಿಯ ಭೀಕರತೆಗೆ ಈ ಶೋರೂಮ್ ನಲ್ಲಿದ್ದ 10ಕ್ಕೂ ಹೆಚ್ಚು ಕಾರುಗಳಲ್ಲಿ ಎರಡು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.
ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ಅಲ್ಲದೇ, ಶೋ ರೂಮ್ ನಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ.
ಆದರೆ, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲಿಟ್ಟಿದ್ದ ಹಲವು ಯಂತ್ರಗಳು ಕೂಡ ಸುಟ್ಟು ಹೋಗಿವೆ ಎನ್ನಲಾಗಿದೆ.