ಕಾರ್ಮಿಕರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರಮುಖ ಸ್ಥಳಗಳಲ್ಲಿ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ 132.40 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ.
ಈ ಹಿಂದಿನ ಬಜೆಟ್ನಲ್ಲಿ ಘೋಷಿಸಿದಂತೆ ಈಗಾಗಲೇ 35 ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲಾಗಿದ್ದು, ಇದರ ಜೊತೆಗೆ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿರುವ ಇಎಸ್ಐ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು 50ರಿಂದ 100ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.