ಕಾರ್ಮಿಕರಿಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಅತ್ಯಾಧುನಿಕ ವ್ಯವಸ್ಥೆಯ 100 ಹಾಸಿಗೆಗಳ ಇಎಸ್ಐ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ತೆರೆಯಲಾಗುತ್ತಿದ್ದು, ಜೊತೆಗೆ ವಲಸೆ ಕಾರ್ಮಿಕರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ 550 ಮನೆಗಳ ನೀಲಿ ನಕ್ಷೆಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಜೊತೆಗೆ ಭದ್ರಾವತಿಯಲ್ಲಿ ಕಾರ್ಮಿಕ ಭವನ ನಿರ್ಮಾಣ ಹಂತದಲ್ಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕರ ಕಲ್ಯಾಣ ಯೋಜನೆಗಳು ರಾಜ್ಯದಲ್ಲಿ ಚುರುಕು ಪಡೆದುಕೊಂಡವು ಎಂದು ಬಿ.ವೈ. ರಾಘವೇಂದ್ರ ತಿಳಿಸಿದರು.