ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಬಿರು ಬೇಸಿಗೆಯಲ್ಲಿ ಬೆವರು ಹರಿಸಿದ್ದ ರಾಜಕೀಯ ಪಕ್ಷಗಳ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದರೆ, ಡಿ.ಕೆ. ಸಹೋದರರು ಕನಕಪುರದ ವಾಸು ಹೋಟೆಲ್ ನಲ್ಲಿ ಉಪಹಾರ ಸವಿದಿದ್ದಾರೆ. ಮಿಕ್ಕ ನಾಯಕರು ಸೋಲು – ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ.
ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರರಾದ ಬಿ.ವೈ. ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಗುರುವಾರದಂದು ಶಿಕಾರಿಪುರದ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಿದ್ದು, ಬೂತ್ ಕಾರ್ಯಕರ್ತರಿಂದ ಮತದಾನದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ವಿಧಾನಸಭಾ ಚುನಾವಣೆಯಲ್ಲಿ ತಾವು ಗೆಲ್ಲುವುದು ಖಚಿತ ಎಂಬ ವಿಶ್ವಾಸದಲ್ಲಿರುವ ಬಿ.ವೈ. ವಿಜಯೇಂದ್ರ, ಎಷ್ಟು ಮತಗಳ ಮುನ್ನಡೆ ಸಿಗಬಹುದು ಎಂಬ ಲೆಕ್ಕಾಚಾರ ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಹೋದರರಿಬ್ಬರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಯಾವ ಬೂತ್ ಗಳಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎಂಬುದರ ವಿವರ ತಿಳಿದುಕೊಂಡಿದ್ದಾರೆ.