alex Certify ಕಾಲೇಜಿಗೆ ಹೋಗುವಾಗಲೇ ನಡೆದಿದೆ ದುರಂತ: ಕಾಲು ಜಾರಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ರೈಲು; ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿಗೆ ಹೋಗುವಾಗಲೇ ನಡೆದಿದೆ ದುರಂತ: ಕಾಲು ಜಾರಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ರೈಲು; ಸ್ಥಳದಲ್ಲೇ ಸಾವು

ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬರು ರೈಲು ಹಳಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದು, ಈ ಸಂದರ್ಭದಲ್ಲಿ ವೇಗವಾಗಿ ಬಂದ ರೈಲು ಹರಿದ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ತಾಲೂಕಿನ ಅಂಕಪುರ ಗ್ರಾಮದ ಬಳಿ ಇಂದು ಬೆಳಗ್ಗೆ 9:00 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಡ್ಡೆ ತೆರಣ್ಯ ಗ್ರಾಮದ ಪ್ರೀತಿ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಮೊಸಳೆಹೊಸಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಗಳನ್ನು ಕಳೆದುಕೊಂಡ ಪೋಷಕರ ರೋಧನ ಮುಗಿಲು ಮುಟ್ಟಿದ್ದು, ಅಲ್ಲದೆ ತಮ್ಮ ಕಾಲೇಜಿನ ವಿದ್ಯಾರ್ಥಿನಿ ಸಾವಿನಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸೂಕ್ತ ನ್ಯಾಯ ಸಿಗುವವರೆಗೂ ರಸ್ತೆ ತೆರವುಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...