alex Certify ಕಾಲೇಜು ಆವರಣದಲ್ಲಿಯೇ ಬಿಟೆಕ್​ ವಿದ್ಯಾರ್ಥಿಯ ಬರ್ಬರ ಕೊಲೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜು ಆವರಣದಲ್ಲಿಯೇ ಬಿಟೆಕ್​ ವಿದ್ಯಾರ್ಥಿಯ ಬರ್ಬರ ಕೊಲೆ..!

ದ್ವಿತೀಯ ವರ್ಷದ ಬಿಟೆಕ್​ ವಿದ್ಯಾರ್ಥಿಯನ್ನು ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೈದ ಘಟನೆಯು ಮೀರತ್​​ನ ಎಂಐಇಟಿ ಕಾಲೇಜಿನಲ್ಲಿ ಬುಧವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು 20 ವರ್ಷದ ನಿಖಿಲ್​ ಚೌಧರಿ​ ಎಂದು ಗುರುತಿಸಲಾಗಿದೆ. ಈತ ಪ್ರಥಮ ವರ್ಷದ ವಿದ್ಯಾರ್ಥಿಗಳೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ. ಈ ಗಲಾಟೆಯ ಬಳಿಕ ಅವರು ಅಭಿಷೇಕ್​​ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ವೈದ್ಯರು ಈತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ. ​

ಮೃತ ನಿಖಿಲ್​ ಸ್ನೇಹಿತ ಸಂಜಯ್​ ಚೌಹಾಣ್​​, ನಿಖಲ್​ ಒಬ್ಬ ಉತ್ತಮ ವಿದ್ಯಾರ್ಥಿಯಾಗಿದ್ದ. ಅಲ್ಲದೇ ಈತ ಈವರೆಗೆ ಯಾರೊಂದಿಗೂ ಜಗಳವಾಡಿರಲಿಲ್ಲ ಎಂದು ಹೇಳಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಮೀರತ್​ ಎಸ್ಪಿ ಕೇಶವ್ ಕುಮಾರ್​, ವೈಯಕ್ತಿಕ ಕಾರಣಕ್ಕೆ ಕೆಲವು ವಿದ್ಯಾರ್ಥಿಗಳು ಸೇರಿ ನಿಖಿಲ್​ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ ಎಂದು ಮಾಹಿತಿ ನೀಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...