ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ಮಂಜೂರಾದ ಬೋಧಕರ ಹುದ್ದೆಗಳ ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ನೀಡಲು ಅವಕಾಶವಿದೆ.
ಕೊನೆ ದಿನಾಂಕದ ನಂತರ ಸಲ್ಲಿಸುವ ಮನವಿ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು. 2021 ರ ಮಾರ್ಗಸೂಚಿ ಅನ್ವಯ ಕೌನ್ಸೆಲಿಂಗ್ ನಡೆಯಲಿದೆ ಎಂದು ತಿಳಿಸಿದ್ದಾರೆ.