ಕಾಶಿ ಯಾತ್ರೆಗೆ ತೆರಳುವವರಿಗಾಗಿ ರಾಜ್ಯ ಸರ್ಕಾರ ಸಹಾಯಧನ ಯೋಜನೆಯನ್ನು ಆರಂಭಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 1:30 ಕ್ಕೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಹಾಯಧನ ವಿತರಣೆ ಮಾಡಲಿದ್ದಾರೆ.
ಕಾಶಿಯಾತ್ರೆ ಸಹಾಯಧನ ಪಡೆಯಲು ಅನುಸರಿಸಬೇಕಾದ ಮಾರ್ಗ ಸೂಚಿಗಳು ಇಂತಿವೆ.
ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಅರ್ಹ ಯಾತ್ರಾರ್ಥಿಗಳಿಗೆ ತಲಾ 5,000 ರೂ. ಗಳನ್ನು ನೀಡಲಾಗುತ್ತದೆ. ಕರ್ನಾಟಕದ ನಿವಾಸಿಗಳು ಮಾತ್ರ ಇದಕ್ಕೆ ಅರ್ಹರು.
ಏಪ್ರಿಲ್ 1, 2022 ಕ್ಕೆ 18 ವರ್ಷ ಮೇಲ್ಪಟ್ಟವರು ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಚುನಾವಣಾ ಆಯೋಗದ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ನೀಡಬೇಕಾಗುತ್ತದೆ.
ಯಾತ್ರಾತಿಗಳ ಬ್ಯಾಂಕ್ ಖಾತೆಯು ಕಡ್ಡಾಯವಾಗಿ ಆಧಾರ್ ಲಿಂಕ್ ಆಗಿರಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://itms.kar.nic.in/hrcehome ಇಲ್ಲಿಗೆ ಭೇಟಿ ನೀಡಬಹುದಾಗಿದೆ.