ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಸೂಪರ್ ಡೂಪರ್ ಹಿಟ್ ‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 21 ವರ್ಷವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಕಿಚ್ಚ ಸುದೀಪ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 2001 ಜುಲೈ 8ರಂದು ತೆರೆಕಂಡ ಈ ಸಿನಿಮಾ ಪ್ರೇಕ್ಷಕರ ಗಮನಸೆಳೆಯುವಲ್ಲಿ ಯಶಸ್ವಿಯಾಗಿತ್ತು ಕಿಚ್ಚ ಸುದೀಪ್ ನಟನೆಗೆ ಫಿದಾ ಆಗಿದ್ದರು
ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಜೋಡಿಯಾಗಿ ರೇಖಾ ಅಭಿನಯಿಸಿದ್ದರು. ಅವಿನಾಶ್, ಪವಿತ್ರಾ ಲೋಕೇಶ್ ಶಿವರಾಂ ಬುಲೆಟ್ ಪ್ರಕಾಶ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದರು. ಈ ಸಿನಿಮಾ ಹಾಡುಗಳು ಸಹ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಹೊಸ ದಾಖಲೆ ಬರೆದವು.