ಕಿತ್ತೂರು ಕರ್ನಾಟಕ ಭಾಗದ ಜನತೆಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರ ಪೀಠವನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಪೀಠ ಮಂಜೂರು ಮಾಡಿದ್ದು, ಆದರೆ 2019 ರಿಂದ ಬೆಳಗಾವಿ ಜಿಲ್ಲಾ ಗ್ರಾಹಕರ ಸಂಘದ ನೇತೃತ್ವದಲ್ಲಿ ಇದಕ್ಕಾಗಿ ಹೋರಾಡುತ್ತಿದ್ದರೂ ಸ್ಪಂದನೆ ಸಿಕ್ಕಿರಲಿಲ್ಲ.
‘ತೂತು ಮಡಿಕೆ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ಹೀಗಾಗಿ ವಕೀಲರು ನಾಲ್ಕು ದಿನಗಳಿಂದ ಕೋರ್ಟ್ ಕಲಾಪಗಳಿಂದ ಹೊರಗುಳಿದು ಧರಣಿ ಆರಂಭಿಸಿದ್ದು, ಇದಕ್ಕೆ ಮಣಿದ ಸರ್ಕಾರ ಇದೀಗ ಪೀಠ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಬೆಳಗಾವಿಯಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರಿ ಪೀಠ ಆರಂಭವಾಗಲಿದೆ.
ಇದರಿಂದಾಗಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನತೆಗೆ ಅನುಕೂಲವಾಗಲಿದೆ.