alex Certify ಕಿರುತೆರೆಯಲ್ಲೂ ʼಕಾಂತಾರʼ ಕಣ್ತುಂಬಿಕೊಳ್ಳಲು ಜ.15 ರಂದು ಸಿಗ್ತಿದೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆಯಲ್ಲೂ ʼಕಾಂತಾರʼ ಕಣ್ತುಂಬಿಕೊಳ್ಳಲು ಜ.15 ರಂದು ಸಿಗ್ತಿದೆ ಅವಕಾಶ

ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಾಣೋದ್ರ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ ಸಿನಿಮಾವನ್ನು ಹೊಗಳುತ್ತಿದ್ದಾರೆ. ಇಷ್ಟು ದಿನ ಥಿಯೇಟರ್ ನಲ್ಲಿ ಸಿನಿಮಾ ನೋಡಿದ್ದ ಜನ ಇದೀಗ ಟಿವಿ ಪರದೆಯಲ್ಲೂ ಸಿನಿಮಾ ನೋಡಲು ಕಾತುರರಾಗಿದ್ದಾರೆ.

ಹೌದು, ಟಿವಿಯಲ್ಲಿ ಈ ಸಿನಿಮಾ ಯಾವಾಗ ಬರಲಿದೆ ಎಂಬ ಒಂದಿಷ್ಟು ಪ್ರಶ್ನೆಗಳಿಗೆ ಉತ್ತರ ದೊರಕಿದೆ. ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ತೆರೆಗೆ ಬರಲಿದೆಯಂತೆ. ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರವಾಗಲಿದೆ. ಈ ಮೂಲಕ ಸಿನಿಮಾ ಪ್ರಿಯರಿಗೆ ಹಬ್ಬದೂಟವೇ ಸರಿ.

ಹೊಂಬಾಳೆ ಸಂಸ್ಥೆ ನಿರ್ಮಾಣದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ದೀಪಕ್ ರೈ, ಗುರು ಸನಿಲ್, ಪ್ರಕಾಶ್ ತುಮಿನಾಡು, ರಂಜನ್, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್ ಸೇರಿದಂತೆ ಇನ್ನು ಅನೇಕರು ನಟಿಸಿದ್ದಾರೆ‌.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...