alex Certify ಕಿರುತೆರೆಯಲ್ಲೂ ಪ್ರಸಾರವಾಗಲಿದೆ ʼಕಾಂತಾರಾʼ; ನಾಳೆಯಿಂದಲೇ ಅಮೆಜಾನ್‌ ಪ್ರೈಂ ನಲ್ಲಿ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆಯಲ್ಲೂ ಪ್ರಸಾರವಾಗಲಿದೆ ʼಕಾಂತಾರಾʼ; ನಾಳೆಯಿಂದಲೇ ಅಮೆಜಾನ್‌ ಪ್ರೈಂ ನಲ್ಲಿ ಲಭ್ಯ

ಕನ್ನಡದ ಬ್ಲಾಕ್‌ ಬಸ್ಟರ್ ಸಿನಿಮಾ ʼಕಾಂತಾರʼ ಚಿತ್ರವನ್ನು ಜಗತ್ತಿನಾದ್ಯಂತ ಡಿಜಿಟಲ್ ಪ್ರೀಮಿಯರ್ ಮೂಲಕ ಬಿಡುಗಡೆಗೊಳಿಸುವುದಾಗಿ ಪ್ರೈಂ ವಿಡಿಯೊ ತಿಳಿಸಿದೆ. ‌

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಾಣದ ಈ ಚಿತ್ರದ ಕಥೆ ರಚನೆ ಹಾಗೂ ನಿರ್ದೇಶನವನ್ನು ರಿಷಬ್ ಶೆಟ್ಟಿ ಮಾಡಿದ್ದಾರೆ. ಸಪ್ತಮಿ ಗೌಡ, ಕಿಶೋರ್ ಕುಮಾರ್, ಅಚ್ಯುತ್ ಕುಮಾರ್ ಮುಂತಾದ ಪ್ರಮುಖರು ಚಿತ್ರದಲ್ಲಿ ಅಭಿನಯಿಸಿದ್ದು ರಿಷಬ್ ಶೆಟ್ಟಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಹೃದಯವನ್ನು ಗೆದ್ದಿರುವ ಕಾಂತಾರ ಚಿತ್ರವನ್ನು ಇದೀಗ ನವೆಂಬರ್ 24ರಿಂದ ಮನೆಯಲ್ಲೇ ಕುಳಿತು ವೀಕ್ಷಿಸಬಹುದಾಗಿದೆ. ಭಾರತ ಸೇರಿದಂತೆ 240 ದೇಶ, ಪ್ರಾಂತ್ಯಗಳಲ್ಲಿನ ಪ್ರೈಂ ಸದಸ್ಯರು ಚಿತ್ರವನ್ನು ಆನ್ಲೈನ್ನಲ್ಲಿ ವೀಕ್ಷಿಸಬಹುದು. ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಚಿತ್ರವನ್ನು ಆನಂದಿಸಬಹುದು.

ಕರ್ನಾಟಕದ ದಕ್ಷಿಣ ಕರಾವಳಿ ರಾಜ್ಯದಲ್ಲಿರುವ ಕಾಡುಬೆಟ್ಟು ಕಾಡಿನಲ್ಲಿ ವಾಸಿಸುವ ಸಮುದಾಯವೊಂದರ ಸುತ್ತ ಚಿತ್ರಕಥೆಯನ್ನು ಹೆಣೆಯಲಾಗಿದೆ. ಮಾನವ ಹಾಗೂ ಪ್ರಕೃತಿ ನಡುವಿನ ಸಂಘರ್ಷವನ್ನು ಇಲ್ಲಿ ಮನಮುಟ್ಟುವಂತೆ ವಿವರಿಸಲಾಗಿದೆ. ಸಮುದಾಯದಲ್ಲಿ ನಡೆಯುವ ಒಂದು ಸಾವಿನಿಂದಾಗಿ ಹಳ್ಳಿ ಜನರು ಹಾಗೂ ದುಷ್ಟ ಶಕ್ತಿಯ ನಡುವೆ ಸಂಘರ್ಷ ಏರ್ಪಡುತ್ತದೆ. ಶಿವ ಎನ್ನುವ ಪಾತ್ರ ಇಲ್ಲಿ ಪ್ರಮುಖವಾಗಿದ್ದು ದುಷ್ಟ ಶಕ್ತಿಯ ವಿರುದ್ಧ ಬಂಡಾಯವೆದ್ದು ಹಳ್ಳಿಯನ್ನು ಹಾಗೂ ಪ್ರಕೃತಿಯನ್ನು ರಕ್ಷಿಸುತ್ತಾನೆ.

ಡಿಜಿಟಲ್ ವೇದಿಕೆಯಲ್ಲಿ ಕಾಂತಾರವನ್ನು ಬಿಡುಗಡೆ ಮಾಡುತ್ತಿರುವ ಕುರಿತು ಮಾತನಾಡಿರುವ ನಿರ್ದೇಶಕ ಹಾಗೂ ನಟರಾಗಿರವ ರಿಷಬ್ ಶೆಟ್ಟಿ, “ದೇಶದ ಮೂಲೆಮೂಲೆಗಳಲ್ಲಿನ ಸಿನಿಮಾ ಪ್ರಿಯರು ಕಾಂತಾರ ಚಿತ್ರಕ್ಕೆ ಮೆಚ್ಚುಗೆಯ ಸುರಿಮಳೆ ಸುರಿಸಿದ್ದಾರೆ. ಹೀಗಾಗಿ ನನಗೆ ತುಂಬಾ ಖುಷಿ ಇದೆ. ಜೊತೆಗೆ ಈ ಚಿತ್ರ ಪ್ರೈಂ ವೀಡಿಯೊ ಮೂಲಕ ಜಾಗತಿಕವಾಗಿ ಡಿಜಿಟಲ್ ಪ್ರೀಮಿಯರ್ನಲ್ಲಿ ಬಿಡುಗಡೆಗೊಳ್ಳುತ್ತಿದೆ. ಚಿತ್ರದೆಡೆಗಿನ ನಮ್ಮ ಒಲವು ಹಾಗೂ ಪರಿಶ್ರಮದ ಕಥೆಯನ್ನು ವಿಶ್ವಮಟ್ಟದಲ್ಲಿ ಇನ್ನಷ್ಟು ಜನರಿಗೆ ತಲುಪುವುದಕ್ಕೆ ವೇದಿಕೆ ಸಿಕ್ಕಿರುವುದು ಸಂತೋಷ ತಂದಿದೆ. ಇದು ಸಾರ್ವತ್ರಿಕವಾಗಿ ಆಕರ್ಷಣೆ ಹೊಂದಿದ ಕಥೆಯಾಗಿದ್ದು, ಕಥಾವಸ್ತುವಿನಲ್ಲಿ ಸ್ಥಳೀಯ ಕಂಪಿದೆ. ಚಿತ್ರದ ಕೊನೆಯ ಕ್ಷಣದವರೆಗೂ ಪ್ರೇಕ್ಷಕರಲ್ಲಿ ಕುತೂಹಲವನ್ನು ಹೆಚ್ಚಿಸುತ್ತಲೇ ಇರುತ್ತದೆ “ ಎಂದರು.

ಚಿತ್ರದ ನಿರ್ಮಾಪಕರಾದ ವಿಜಯ್ ಕಿರಗಂದೂರ್, “ ಹೊಂಬಾಳೆ ಫಿಲ್ಮ್ಸ್ ಮುಖಾಂತರ ನಾವು ಯಾವಾಗಲೂ ಆಕರ್ಷಕವಾದ ಕಥೆಗಳನ್ನು ಅಸಾಮಾನ್ಯ ರೀತಿಯಲ್ಲಿ ಪ್ರಸ್ತುತ ಪಡಿಸುವುದಕ್ಕೆ ಇಷ್ಟಪಡುತ್ತೇವೆ. ಕಾಂತಾರ ಸಿನಿಮಾ ನಮ್ಮ ಅಂಥ ಪ್ರಯತ್ನಗಳಲ್ಲೊಂದು. ಚಿತ್ರವು ವಿವಿಧ ಹಿನ್ನೆಲೆ ಹಾಗೂ ಪ್ರದೇಶಗಳಿಂದ ಬಂದ ಪ್ರೇಕ್ಷಕರನ್ನೂ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ರಿಷಬ್ ಹಾಗೂ ಇಡೀ ಚಿತ್ರತಂಡ ಇಂಥದ್ದೊಂದು ಅತ್ಯದ್ಭುತ ಚಿತ್ರವನ್ನು ನಿರ್ಮಿಸಲು ಸಾಕಷ್ಟು ಪರಿಶ್ರಮ ಪಟ್ಟಿದೆ. ಈಗ ಇಂಥ ಅದ್ಭುತವಾದ ಚಿತ್ರವನ್ನು ಪ್ರೈಂ ವಿಡಿಯೊ ಮುಖಾಂತರ ಜಗತ್ತಿನಾದ್ಯಂತ ಇರುವ ಪ್ರೇಕ್ಷಕರನ್ನು ತಲುಪಲು ಉತ್ಸುಕರಾಗಿದ್ದೇವೆ “ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...