alex Certify ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೆರೆಮನೆಯಲ್ಲಿದ್ದ ಮಾಜಿ ಪ್ರಿಯಕರನಿಂದಲೇ ಕಿರುಕುಳ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೆರೆಮನೆಯಲ್ಲಿದ್ದ ಮಾಜಿ ಪ್ರಿಯಕರನಿಂದಲೇ ಕಿರುಕುಳ…!

ತನ್ನ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದ ಹಿಂದಿ ಕಿರುತೆರೆ ನಟಿ ವೈಶಾಲಿ ಠಕ್ಕರ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇವರ ನೆರೆಮನೆಯಲ್ಲಿ ವಾಸವಾಗಿದ್ದ ನಟಿಯ ಮಾಜಿ ಪ್ರಿಯಕರ ರಾಹುಲ್ ಎಂಬಾತ ತನ್ನ ಪತ್ನಿ ದಿಶಾ ಜೊತೆ ಸೇರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ನವಲಾನಿ ಮತ್ತು ದಿಶಾ ವಿರುದ್ಧ ಐಪಿಸಿ ಸೆಕ್ಷನ್ 306 ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ನಟಿ ಆತ್ಮಹತ್ಯೆ ಪ್ರಕರಣ ನಡೆದ ಬಳಿಕ ದಂಪತಿಗಳು ತಲೆಮರೆಸಿಕೊಂಡಿದ್ದು, ಅವರುಗಳ ಪತ್ತೆಗೆ ಬಲೆ ಬೀಸಲಾಗಿದೆ.

ಭಾನುವಾರದಂದು ಇಂದೋರ್ ನ ತಮ್ಮ ನಿವಾಸದಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ವೈಶಾಲಿ ಸಾವನ್ನಪ್ಪಿದ್ದರು. ನೆರೆಮನೆಯ ನಿವಾಸಿ ರಾಹುಲ್ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿದೆ.

ನಟಿ ವೈಶಾಲಿ ಅವರು ಈ ಹಿಂದೆ ದಂತ ವೈದ್ಯರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಬಳಿಕ ಇದು ಮುರಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಕುರಿತು ಹಲವು ಊಹಾಪೋಹಗಳು ಹರಿದಾಡಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...