alex Certify ಕಿವುಡ ಹಾಗೂ ಮೂಗ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿವುಡ ಹಾಗೂ ಮೂಗ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಶ್ರವಣ ದೋಷ ಹಾಗೂ ಮೂಗಳಾಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯು ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಯುವತಿಯು ಭಿಲ್ವಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ವೇಳೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯು ತೀವ್ರ ರಕ್ತಸ್ರಾವ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಂದಹಾಗೆ ವೈದ್ಯರು ತಪಾಸಣೆ ನಡೆಸಿದ ವೇಳೆಯಲ್ಲಿ ಯುವತಿಯು ಗರ್ಭವತಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕೂಡಲೇ ವೈದ್ಯರು ಸ್ಥಳೀಯ ಪೊಲೀಸ್​ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಬಳಿಕ ಸಂಜ್ಞೆ ಭಾಷೆ ಪರಿಣಿತರ ಸಹಾಯದಿಂದ ಯುವತಿಯು ತನ್ನ ಮೇಲಾದ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ.

ಸಂಜ್ಞೆ ಭಾಷಾ ತಜ್ಞರೊಂದಿಗೆ ಸಂವಹನ ನಡೆಸಿದ ಯುವತಿಯು ಎರಡು ತಿಂಗಳ ಹಿಂದೆ ಕೃಷಿ ಫಾರ್ಮ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಇಬ್ಬರಿಂದ ಮೂವರು ಅಪರಿಚಿತ ವ್ಯಕ್ತಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ ಅಂತಾ ಭಿಲ್ವಾರಾ ಕಲೆಕ್ಟರ್​​​ ಆಶಿಶ್​ ಮೋದಿ ಹೇಳಿದ್ದಾರೆ.

ಗರ್ಭಾವಸ್ಥೆಯಿಂದ ಯುವತಿಯ ಜೀವಕ್ಕೆ ಅಪಾಯವಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಯುವತಿಗೆ ಗರ್ಭಪಾತ ಮಾಡಲಾಗಿದೆ. ಯುವತಿ ಇನ್ನೂ ಸರ್ಕಾರಿ ಆಸ್ಪತ್ರೆಯಲ್ಲಿಯೇ ಇದ್ದು ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಆಶಿಶ್​ ಮೋದಿ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...