ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಇವತ್ತು ಬಿಡುಗಡೆಯಾಗಲಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ.
ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ ಮಾಡಲಾಗುತ್ತದೆ. ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿಲ್ಲದ ರೈತರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಅಲ್ಲದೇ, ಆನ್ಲೈನ್ನಲ್ಲಿಯೂ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಬಹುದಾಗಿದೆ.
pmkisan.gov.in ವೆಬ್ಸೈಟ್ ನಲ್ಲಿ ಫಲಾನುಭವಿ ಸ್ಥಿತಿ ಕ್ಲಿಕ್ ಮಾಡಿ, ಆಧಾರ್ ಸಂಖ್ಯೆ, pm-kisan ಖಾತೆಯ ಸಂಖ್ಯೆ ಮತ್ತು ನೊಂದಾಯಿತ ಮೊಬೈಲ್ ಸಂಖ್ಯೆ ಭರ್ತಿ ಮಾಡಿ ಮಾಹಿತಿ ಪಡೆಯಬಹುದು ಎನ್ನಲಾಗಿದೆ.