alex Certify ಕುತೂಹಲ ಕೆರಳಿಸಿದ ಮಾಜಿ ಸಿಎಂ ಯಡಿಯೂರಪ್ಪರೊಂದಿಗಿನ ಕಾಂಗ್ರೆಸ್‌ ಶಾಸಕಿ ಭೇಟಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲ ಕೆರಳಿಸಿದ ಮಾಜಿ ಸಿಎಂ ಯಡಿಯೂರಪ್ಪರೊಂದಿಗಿನ ಕಾಂಗ್ರೆಸ್‌ ಶಾಸಕಿ ಭೇಟಿ…!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪನವರ ನಿವಾಸಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ್ದ ಅವರು ಮಾತುಕತೆ ನಡೆಸಿದ್ದಾರೆ.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಭೇಟಿಯಲ್ಲಿ ವಿಶೇಷವೇನಿಲ್ಲ. ಯಡಿಯೂರಪ್ಪನವರು ನನಗೆ ಗುರು ಸಮಾನರಾಗಿದ್ದು, ಗುರು ಪೂರ್ಣಿಮೆ ನಿಮಿತ್ತ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

ರಾಜಕೀಯವಾಗಿ ನನ್ನ ಹಾಗೂ ಯಡಿಯೂರಪ್ಪನವರ ವಿಚಾರಧಾರೆ ಬೇರೆಯಿರಬಹುದು. ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತೇನೆ. ಹಾಗೆಯೇ ಇಂದು ಕೂಡಾ ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇನೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...