alex Certify ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ ಅನಾಹುತ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ ಅನಾಹುತ…!

ಕಾರವಾರ: ವರುಣಾರ್ಭಟಕ್ಕೆ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಜೋಯಿಡಾ ತಾಲೂಕಿನ ಚಾಪೋಲಿ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಶಿಥಿಲಗೊಂಡಿದ್ದ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಶಾಲೆಗೆ ರಜೆ ನೀಡಿದ್ದರಿಂದ ಭಾರಿ ಅನಾಹುತ ತಪ್ಪಿದ್ದು, ಮಕ್ಕಳು ಶಿಕ್ಷಕರು ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...