alex Certify ಕೂಡಿ ಬರದ ಕಂಕಣ ಭಾಗ್ಯ; ಯುವ ರೈತ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂಡಿ ಬರದ ಕಂಕಣ ಭಾಗ್ಯ; ಯುವ ರೈತ ಆತ್ಮಹತ್ಯೆಗೆ ಶರಣು

ಮದುವೆಯಾಗಲು ತನಗೆ ಕನ್ಯೆ ಸಿಗಲಿಲ್ಲವೆಂಬ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮಾಸಣಗಿ ಗ್ರಾಮದ 36 ವರ್ಷದ ಮಂಜು ರುದ್ರಪ್ಪ ನಾಗನೂರ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಹಲವು ವರ್ಷಗಳಿಂದ ಹೆಣ್ಣು ಹುಡುಕುತ್ತಿದ್ದರೂ ಸಹ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಂಜು ರುದ್ರಪ್ಪ, ಕ್ರಿಮಿ ನಾಶಕ ಸೇವಿಸಿ ಸಾವಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡಗಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...