ಹಲವು ರೀತಿಯಲ್ಲಿ ಎಚ್ಚರಿಕೆ ಕೊಡುತ್ತಿದ್ದರೂ ರೈಲುಗಳಿಗೆ ಹೋಗುವ ಪ್ರಯಾಣಿಕರು ತಮ್ಮ ಜೀವವನ್ನು ಪಣಕ್ಕಿಡುವ ಘಟನೆಗಳು ನಡೆಯುತ್ತಲೇ ಇವೆ. ಕೆಲವು ಸಂದರ್ಭಗಳಲ್ಲಿ ಅಲ್ಲಿರುವ ಭದ್ರತಾ ಸಿಬ್ಬಂದಿ ಜನರ ಪ್ರಾಣ ಕಾಪಾಡುವುದು ನಡೆದಿದ್ದು, ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ ರೈಲು ನಿಲ್ದಾಣದಲ್ಲಿ ನಡೆದಿದೆ. ಇದರ ಭಯಾನಕ ವಿಡಿಯೋ ವೈರಲ್ ಆಗಿದೆ.
ಮೇಲ್ಸೇತುವೆಯನ್ನು ಬಳಸುವ ಬದಲು ರೈಲ್ವೆ ಹಳಿಗಳನ್ನು ದಾಟಿ ಪ್ಲಾಟ್‌ಫಾರ್ಮ್ ಹತ್ತಲು ಪ್ರಯತ್ನಿಸುತ್ತಿದ್ದ 65 ವರ್ಷದ ಮಹಿಳೆಯೊಬ್ಬರು ರೈಲಿಗೆ ಸಿಲುಕುವುದರಿಂದ ಠಾಣಾಧಿಕಾರಿ ದೇಶರಾಜ್ ಮೀನಾ ರಕ್ಷಿಸಿದ್ದಾರೆ.
ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳನ್ನು ರೈಲ್ವೇ ಸಚಿವಾಲಯವು ಟ್ವಿಟರ್‌ನಲ್ಲಿ ಬಿಟ್ಟಿದೆ. ಮಧ್ಯಪ್ರದೇಶದ ಹೊಶಂಗಾಬಾದ್ ರೈಲು ನಿಲ್ದಾಣದಲ್ಲಿ ರೈಲ್ವೆ ಹಳಿ ದಾಟುತ್ತಿದ್ದ ಮಹಿಳೆಯೊಬ್ಬರನ್ನು ಅಲರ್ಟ್ ಸ್ಟೇಷನ್ ಮ್ಯಾನೇಜರ್ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿದ್ದಾರೆ. ಪ್ರಯಾಣಿಕರು ನಿಲ್ದಾಣದಲ್ಲಿ ಹಳಿಗಳನ್ನು ದಾಟಲು ಫುಟ್ ಓವರ್ ಬ್ರಿಡ್ಜ್ ಅನ್ನು ಬಳಸಬೇಕೆಂದು ವಿನಂತಿ ಎಂದು ರೈಲ್ವೆ ಇಲಾಖೆ ಹೇಳಿದೆ.