ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಅಂತಹ ಯಾವುದೇ ಚರ್ಚೆಯೂ ನಡೆದಿಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಪ್ರಶ್ನೆಯೇ ಇಲ್ಲ. ದೆಹಲಿಗೆ ಹೋಗಿ ನಾಯಕರನ್ನು ಭೇಟಿಯಾಗಿ ಬಂದಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ಎಲ್ಲಾ ವರ್ಗಗಳ ನಾಯಕರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ. ಅನಗತ್ಯ ಚರ್ಚೆಗಳು ಬೇಡ ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವುದು ತಪ್ಪು ಎಂದು ಹೇಳಿದರು.
ಪ್ರಪೋಸ್ ಮಾಡಿ ಮೂರು ವರ್ಷ; ಪ್ರಿಯಾಂಕ ಸಂಭ್ರಮಾಚರಣೆ
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ರೇಣುಕಾಚಾರ್ಯ, ನಕಲಿ ಆಡಿಯೋ ಬಿಡುಗಡೆ ಮಾಡಿ ಕಟೀಲ್ ವರ್ಚಸ್ಸಿಗೆ ಧಕ್ಕೆ ತರುವ ಯತ್ನ ನಡೆದಿದೆ. ಆಡಿಯೋ ಧ್ವನಿ ತಮ್ಮದಲ್ಲ ಎಂದು ಸ್ವತಃ ಕಟೀಲ್ ಹೇಳಿಕೆ ನೀಡಿದ್ದಾರೆ ಎಂದರು.