alex Certify ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಕೃಷಿ ಮತ್ತು ಕೃಷಿ ಸಂಬಂಧಿತ ಉಪ ಕಸುಬಿನಲ್ಲಿ ತೊಡಗಿರುವವರಿಗೆ ಶೇಕಡ 7 ರ ಬಡ್ಡಿ ದರದಲ್ಲಿ 3 ಲಕ್ಷ ರೂ. ವರೆಗಿನ ಅಲ್ಪಾವಧಿ ಸಾಲ ಒದಗಿಸುವ ಯೋಜನೆಯನ್ನು ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಈಗ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಈ ಯೋಜನೆಯನ್ನು ಮತ್ತಷ್ಟು ಕಾಲ ಮುಂದುವರಿಸುವ ಸಲುವಾಗಿ ಬ್ಯಾಂಕುಗಳಿಗೆ 34,856 ಕೋಟಿ ರೂಪಾಯಿಗಳ ಅನುದಾನ ನೀಡಲು ಬುಧವಾರದಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ.

ಬ್ಯಾಂಕುಗಳು ಶೇ.1.5 ರಷ್ಟು ಬಡ್ಡಿ ರಿಯಾಯಿತಿ ಒದಗಿಸಲು ಈ ಅನುದಾನದಿಂದ ಅನುಕೂಲವಾಗಲಿದ್ದು, ಕೃಷಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ದೊರೆಯುವಂತಾಗುತ್ತದೆ. ಅಲ್ಲದೆ ಆತಿಥ್ಯ ಕ್ಷೇತ್ರದಲ್ಲಿ ಹಣದ ಹರಿವು ಹೆಚ್ಚಿಸುವ ಸಲುವಾಗಿಯೂ ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...